ಶನಿವಾರಸಂತೆ, ಆ. ೯: ಸಮೀಪದ ಕೊಡ್ಲಿಪೇಟೆಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಭಾನುವಾರ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.

ಕೊಡ್ಲಿಪೇಟೆಯ ಗಣಪತಿ ದೇವಸ್ಥಾನದಲ್ಲಿ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು ಪೂಜೆ ಸಲ್ಲಿಸಿ, ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು.

ಇಂದು ಪ್ರತಿಭಟನೆ

ಸಿದ್ದಾಪುರ, ಆ. ೯: ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಪಂಚಾಯ್ತಿ ವ್ಯಾಪ್ತಿಯ ಯಡೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಅಣ್ಣಪ್ಪ (೪೫) ಎಂಬವರು ಕಾಡಾ£ ಧಾಳಿಗೆ ಬಲಿಯಾಗಿದ್ದು, ಆನೆ ಮಾನವ ಸಂಘರ್ಷವನ್ನು ತಡೆಯುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ತಾ. ೧೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಒಂಟಿ ಅಂಗಡಿ ವೃತ್ತದಲ್ಲಿ ಕಣ್ಣಂಗಾಲ ಶಕ್ತಿ ಕೇಂದ್ರ ಪ್ರಮುಖ ಬೇರೆರ ರಂಜಿ ನೇತೃತ್ವದಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.