ಮಡಿಕೇರಿ, ಆ. ೯: ವಿಶ್ವ ಆದಿಮಸಂಜಾತರ ಹಕ್ಕುಗಳ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಮಣ್ಣಿನ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ (ಅನಿಮಿಸ್ಟಿಕ್) ಜನಾಂಗ ಕೊಡವರ ಪರವಾದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಭಾರತ ಸರಕಾರ, ಕರ್ನಾಟಕ ಸರಕಾರ ಮತ್ತು ವಿಶ್ವಸಂಸ್ಥೆಗೆ ಸಲ್ಲಿಸಿದರು. “ಕೊಡವರ ಭೂ-ರಾಜಕೀಯ ಸ್ವಾಯತ್ತತೆಯ ಶೋಧ,” ಆದಿಮಸಂಜಾತ ಕೊಡವರಿಗೆ ಸ್ವಯಂ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವಯಂ-ನಿರ್ಣಯದ ಹಕ್ಕುಗಳು, ಆದಿಮಸಂಜಾತ ಮಾನ್ಯತೆಯೊಂದಿಗೆ ವಿಶಿಷ್ಟ ಜನಾಂಗೀಯ ಸಮುದಾಯ ವಾಗಿ ಕೊಡವರಿಗೆ ಸಾಂವಿಧಾನಿಕ ವಿಶೇಷ ಖಾತರಿ ನೀಡಬೇಕು ಎಂದು ಒತ್ತಾಯಿಸಿದರು. ಸತ್ಯಾಗ್ರಹದಲ್ಲಿ ಚೋಳಪಂಡ ಜ್ಯೋತಿ ನಾಣಯ್ಯ, ಅಳಮಂಡ ಜೈ ಗಣಪತಿ, ಪಟ್ಟಮಾಡ ಕುಶ, ಅಜ್ಜಿಕುಟ್ಟೀರ ಲೋಕೇಶ್, ಮಂದಪAಡ ಮನೋಜ್ ಮಂದಣ್ಣ, ಕಿರಿಯಮಾಡ ಶೆರಿನ್, ಅರೆಯಡ ಗಿರೀಶ್, ಅರೆಯಡ ಸಾವನ್, ಚೋಳಪಂಡ ನಾಣಯ್ಯ, ತೋಲಂಡ ಸೋಮಯ್ಯ, ನಂದಿನೆರವAಡ ವಿಜು, ಮಣವಟ್ಟಿರ ಚಿಣ್ಣಪ್ಪ, ನಂದಿನೆರವAಡ ಅಪ್ಪಯ್ಯ, ಮಣವಟ್ಟಿರ ಸ್ವರೂಪ್, ನಂದಿನೆರವAಡ ಅಯ್ಯಣ್ಣ, ಮಣವಟ್ಟಿರ ನಂದ, ಪಾಲೆಕಂಡ ಪ್ರಧಾನ್ ಪೂಣಚ್ಚ, ಐತಿಚಂಡ ಪೂವಣ್ಣ, ಅಚ್ಚಕಾಳೇರ ನವೀನ್ ಮೊಣ್ಣಪ್ಪ ಹಾಗೂ ಕೂಪದಿರ ಸಾಬು ಪಾಲ್ಗೊಂಡಿದ್ದರು.