ನಾಪೋಕ್ಲು, ಆ. ೯: ಬ್ರಹ್ಮಗಿರಿ ಸಹೋದಯದ ವತಿಯಿಂದ ಎಸ್‌ಎಂಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಇಲ್ಲಿನ ಅಂಕುರ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಬ್ರಹ್ಮಗಿರಿ ಸಹೋದಯದ ವತಿಯಿಂದ ಎಸ್‌ಎಂಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಇಲ್ಲಿನ ಅಂಕುರ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಕೊಡಗು ವಿದ್ಯಾಲಯದ ವಿರುದ್ಧ ಅಂತಿಮ ಸ್ಪರ್ಧೆಯಲ್ಲಿ ಬಾಲಕಿಯರು ಪ್ರಥಮ ಸ್ಥಾನವನ್ನು ಹಾಗೂ ಬಾಲಕರು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಕಿರಿಯ ಮತ್ತು ಹಿರಿಯರ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.