ಪೊನ್ನAಪೇಟೆ, ಆ. ೯: ತಂತ್ರಜ್ಞಾನದ ಯುಗದಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದರು.

ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಭಾನುವಾರ ವೀರಾಜಪೇಟೆ- ಅಮ್ಮತಿ ಮುಖ್ಯರಸ್ತೆಯಲ್ಲಿರುವ ಕೊಮ್ಮೆತೋಡು ಸೇತುವೆ ಬಳಿಯ ಭತ್ತದ ಗದ್ದೆಯಲ್ಲಿ ಮೊದಲನೇ ವರ್ಷದ ಜಿಲ್ಲಾಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾ ಸಂಗಮ-೨೦೨೬ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಜನಾಂಗಕ್ಕೆ ಕೃಷಿ ಸಂಸ್ಕೃತಿಯನ್ನು ನೆನಪಿಸಲು ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿವೆ. ಕೊಡಗಿನ ಮೂಲ ಸಂಸ್ಕೃತಿ ಉಳಿವಿಗೂ ಕೆಸರುಗದ್ದೆ ಕ್ರೀಡಾಕೂಟ ಪ್ರೇರಣೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಬಿಜೆಪಿ ಮುಖಂಡ ಗುಮ್ಮಟ್ಟಿರ ಕಿಲನ್ ಗಣಪತಿ ಮಾತನಾಡಿ, ಜಾತಿ, ಮತ, ಜನಾಂಗಗಳ ನಡುವೆ ಒಗ್ಗಟ್ಟು ಮೂಡಿಸಲು ವಿವಿಧತೆಯಲ್ಲಿ ಏಕತೆಯನ್ನು ತರಲು ಕ್ರೀಡಾಕೂಟ ಪ್ರಬಲವಾದ ಸಾಧನವಾಗಿದೆ. ಕ್ರೀಡೆಯಿಂದಲೂ ಸಮಾಜದಲ್ಲಿ ಜನಾಂಗೀಯ ಸಾಮರಸ್ಯ ಮೂಡಿಸಲು ಸಾಧ್ಯವಿದೆ ಎಂದು ಹೇಳಿದರು.

ಕೆ.ಎಂ.ಎಸ್.ಎ. ಗೌರವಾಧ್ಯಕ್ಷ ಅಕ್ಕಳತಂಡ ಎಸ್. ಮೊಯ್ದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊಮ್ಮೆತೊಡು (ಐಮಂಗಲ) ಜಮಾಅತ್ ಅಧ್ಯಕ್ಷ ಪೊಯಕೆರ ಎಸ್. ರಫೀಕ್, ಬೆಮ್ಮತಿ ಜಮಾಅತ್ ಅಧ್ಯಕ್ಷ ಕೆ. ಎಂ. ಅಬ್ದುಲ್ ರೆಹಮಾನ್ (ಬಾಪು), ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್, ಪೊನ್ನಂಪೇಟೆಯ ಕೂರ್ಗ್ ರೈಸ್ ಟ್ರೇಡರ್ಸ್ ಮಾಲೀಕರಾದ ಕೆ. ಎಂ. ಇಬ್ರಾಹಿಂ, ಅಮ್ಮತ್ತಿಯ ಸಮಾಜ ಸೇವಕರಾದ ಅನಿಲ್, ಗೋಣಿಕೊಪ್ಪಲಿನ ಉಮ್ಮರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ಕೆ.ಎಂ.ಎಸ್.ಎ. ಉಪಾಧ್ಯಕ್ಷ ಕೆಂಗೋಟAಡ ಎಸ್. ಸೂಫಿ, ಕುಂಡAಡ ಎ. ರಜ್ಹಾಕ್, ಕೋಶಾಧಿಕಾರಿ ಆಲೀರ ಎ. ಅಬ್ದುಲ್ ಅಜೀಜ್ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೆ.ಎಂ.ಎಸ್.ಎ. ಅಧ್ಯಕ್ಷ ಆಲೀರ ಎಂ. ರಶೀದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಂ.ಎಸ್.ಎ. ಪ್ರಧಾನ ಕಾರ್ಯದರ್ಶಿ ಮೀತಲ್ ತಂಡ ಎಂ. ಇಸ್ಮಾಯಿಲ್ ಸ್ವಾಗತಿಸಿದರು. ಕ್ರೀಡಾ ಸಂಚಾಲಕರಾದ ಕತ್ತಣಿರ ಎ. ಅಂದಾಯಿ ವಂದಿಸಿದರು. ಕಾರ್ಯದರ್ಶಿ ಬಲ್ಯತ್ಕಾರಂಡ ಯು. ಅಶ್ರಫ್ ಕಾರ್ಯಕ್ರಮ ನಿರ್ವಹಿಸಿದರು.