ಚೆಯ್ಯಂಡಾಣೆ, ಆ. ೯: ನರಿಯಂದಡ ಗ್ರಾಮ ಪಂಚಾಯಿತಿಯ ೨೦೨೬-೨೭ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಚೆಯ್ಯಂಡಾಣೆಯಲ್ಲಿ ನಡೆಯಿತು.
ನರಿಯಂದಡ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ನೋಡೆಲ್ ಅಧಿಕಾರಿ ಮಹೇಶ್ ಡಿ.ಹೆಚ್. ವಹಿಸಿದ್ದರು. ೨೦೨೫ರ ಅನುಪಾಲನಾ ವರದಿಯನ್ನು ರೋಹಿತ್ ಮಂಡಿಸಿದರು.
೨೦೨೫-೨೬ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ವರದಿಯನ್ನು ನುಸೈಬಾ ಸಭೆಯಲ್ಲಿ ಮಂಡಿಸಿದರು. ೧೫ನೇ ಹಣಕಾಸು ಯೋಜನೆಯ ಕಾಮಗಾರಿಗಳ ವರದಿಯನ್ನು ರೇಷ್ಮಾ ಸಭೆಯಲ್ಲಿ ಮಂಡಿಸಿದರು.
ಈ ಸಂದರ್ಭ ಮಾಜಿ ಗ್ರಾ.ಪಂ. ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಹಾಗೂ ಮಾಜಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಎರಡು ವರ್ಷದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚೆಕ್ ಮೆಜರ್‌ರ್ಮೆಂಟ್ ಆಗಿಲ್ಲ ಇದಕ್ಕೆ ಆಕ್ಷೇಪಣೆ ಸಲ್ಲಿಸುತ್ತಿದ್ದಾರೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಬೇಕಾಗಿದ್ದು ಇಲ್ಲಿ ಅಲ್ಲ, ತಾಲೂಕು ಪಂಚಾಯಿತಿ ಮೂಲಕ ಜಿಲ್ಲಾಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಿ ಹಲವಾರು ಬಾರಿ ಚೆಕ್ ಮೆಜರ್‌ರ್ಮೆಂಟ್ ಮಾಡಲು ಸಂಬAಧಪಟ್ಟವರಿಗೆ ಮಾಹಿತಿ ನೀಡಿದರು.
ಎರಡು ವರ್ಷದಿಂದ ಸಂಬAಧಪಟ್ಟವರು ಇತ್ತ ತಿರುಗಿ ನೋಡಿಲ್ಲ ಎಂದರು. ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಬಾಲಕೃಷ್ಣ ರೈ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಮಾಜಿ ಗ್ರಾ.ಪಂ. ಸದಸ್ಯರುಗಳು, ಗ್ರಾ.ಪಂ. ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಆಶಾ ಕುಮಾರಿ ಸ್ವಾಗತಿಸಿ, ದಿನೇಶ್ ಕುಮಾರ್ ವಂದಿಸಿದರು.