ಭಾಗಮಂಡಲ, ಆ. ೧೦: ಕಾರುಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೊಠಡಿ ಭಾನುವಾರ ಸಂಜೆ ಸುರಿದ ಮಳೆಗೆ ಸಂಪೂರ್ಣ ಕುಸಿದಿದೆ.
ಘಟನೆಯ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿ ಹಾನಿಗೊಳಗಾದ ಶಾಲಾ ಕೊಠಡಿಯನ್ನು ಪರಿಶೀಲಿಸಲಾಯಿತು. ಸ್ಥಳಕ್ಕೆ ಇಂಜಿನಿಯರ್ಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಶಾಲೆಯ ಎಸ್ಡಿಎಂಸಿ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಯ ಉಳಿದ ಕೊಠಡಿಗಳಿಗೂ ಮಳೆಯಿಂದ ಹಾನಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದರು. ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಿ ಹಾನಿಗೊಳಗಾದ ಕೊಠಡಿಯನ್ನು ತೆರವುಗೊಳಿಸುವುದು ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಲಾಯಿತು.