ಮಡಿಕೇರಿ, ಆ. ೧೧ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗಾನ ಕೋಗಿಲೆ ಎಸ್.ಜಾನಕಿ ಅವರಿಗೆ ಪುಷ್ಪ ನಮನ, ನುಡಿ ನಮನ, ಗಾನ ನಮನ ಕಾರ್ಯಕ್ರಮ ತಾ.೧೪ ರಂದು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಗಾಯಕರು, ಶಕ್ತಿ ದಿನಪತ್ರಿಕೆಯ ಸಂಪಾದಕರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಟ್ರಸ್ಟಿ ಜಿ.ಚಿದ್ವಿಲಾಸ್ ಉದ್ಘಾಟಿಸಲಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಟ್ರಸ್ಟಿ ಅನಿಲ್ ಹೆಚ್.ಟಿ ನುಡಿ ನಮನ ಸಲ್ಲಿಸಲಿದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ.ಪ್ರೇಮ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಕೊಡಗು ಜಿಲ್ಲಾ ಸಹಮತ ವೇದಿಕೆ, ಕೊಡಗು ಪತ್ರಕರ್ತರ ಸಂಘ, ಮಡಿಕೇರಿಯ ಲಯನ್ಸ್ ಸಂಸ್ಥೆ, ಕೊಡಗು ಜಿಲ್ಲಾ ಮಹಿಳಾ ಬರಹಗಾರÀರ ಸಂಘ, ಕೊಡಗು ಜಾನಪದ ಪರಿಷತ್ತು, ಸಮರ್ಥ ಕನ್ನಡಿಗರು, ಕೊಡಗು ಜಿಲ್ಲಾ ಅಹಿಂದ ಒಕ್ಕೂಟ, ರೋಟರಿ ವುಡ್ಸ್ ಮಡಿಕೇರಿ, ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕೊಡಗು ಕ್ರೆöÊಸ್ತ ಸಹಕಾರ ಸಂಘ, ಕೊಡಗು ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಸಂಸ್ಥೆ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಗೌಡ ವಿದ್ಯಾ ಸಂಘ, ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್ ಮತ್ತು ಚೌಡೇಶ್ವರಿ ದೇವಾಂಗ ಮಹಿಳಾ ಸಮಾಜದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಹಾಗೂ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಗೌರವ ಕಾರ್ಯದರ್ಶಿ ಭಾರತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.