ಪೊನ್ನಂಪೇಟೆ, ಆ.೧೧: ಕಾಡಿನ ಸಂರಕ್ಷಣೆ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದ ಉದ್ದೇಶದಿಂದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ, ಕಾಡಂತಾರ ಫೌಂಡೇಶನ್ ಮತ್ತು ಟ್ರಾನ್ಸ್ಫಾರ್ಮಿಂಗ್ ಟುಮಾರೋ ಫೌಂಡೇಶನ್ ಸಹಯೋಗದಲ್ಲಿ ಇಲ್ಲಿನ ಅರಣ್ಯ ಮಹಾವಿದ್ಯಾಲಯದಲ್ಲಿ ತಾ.೧೨ರಂದು (ಇಂದು)ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಶಿಬಿರವು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ.
ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪ್ರಮಾಣ, ಹಿಮೋಗ್ಲೋಬಿನ್ ಹಾಗೂ ರಕ್ತದ ಗುಂಪು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ವೈದ್ಯಕೀಯ ಸಲಹೆ ಮತ್ತು ಮಾರ್ಗದರ್ಶನ ಉಚಿತವಾಗಿ ನೀಡಲಾಗುತ್ತದೆ.