ಮಡಿಕೇರಿ, ಆ. ೧೨; ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾ ಧ್ಯಕ್ಷರುಗಳಿಗೆ ವಿಭಾಗಗಳ ಉಸ್ತುವಾರಿಯ ಮರು ಹಂಚಿಕೆ ಮಾಡಲಾಗಿದ್ದು, ಕೊಡಗು ಜಿಲ್ಲಾ ಉಸ್ತುವಾರಿಯನ್ನು ಎಸ್.ಆರ್. ಮೆಹರೋಝ್ ಖಾನ್ ಅವರಿಗೆ ವಹಿಸಲಾಗಿದೆ.
ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ರಾಜ್ಯಮಟ್ಟದ ಹಾಗೂ ಜಿಲ್ಲೆ ಮತ್ತು ತಾಲೂಕು ಮಟ್ಟದ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿತ್ತು. ಇದೀಗ ಪ್ರಾಧಿಕಾರದ ಐದು ಉಪಾಧ್ಯಕ್ಷರುಗಳಿಗೆ ವಿಭಾಗವಾರು ಜಿಲ್ಲೆಗಳ ಜವಾಬ್ದಾರಿಯನ್ನು ಮರು ಹಂಚಿಕೆ ಮಾಡಲಾಗಿದೆ. ಈ ಪೈಕಿ ರಾಜ್ಯ ಉಪಾಧ್ಯಕ್ಷರಾಗಿರುವ ಮೆಹರೋಝ್ ಖಾನ್ ಅವರಿಗೆ ಬೆಂಗಳೂರು-೨ ವಿಭಾಗದಡಿ ಕೊಡಗು ಜಿಲ್ಲೆ ಸೇರಿದಂತೆ ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ ಜಿಲ್ಲೆಗಳ ಜವಾಬ್ದಾರಿಯನ್ನು ವಹಿಸಲಾಗಿದೆ.