ಬೆಂಗಳೂರು, ಆ. ೧೨: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗವು ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ ಹಾಗೂ ಮಾರಾಟದ ವಿರುದ್ಧ ಸಮರ ಸಾರಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ೨೦೦೬ರ ಕಲಂ ೩೦(೨)(ಚಿ) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಗಳು ೨೦೧೧ರ ನಿಯಮ ೨.೩.೪ರ ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಬಳಸಿ ಸರ್ಕಾರವು ೨೦೨೬ರ ಆಗಸ್ಟ್ ೧೦ ರಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆ ಹೊರಬಿದ್ದ ದಿನಾಂಕದಿAದ ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ಈ ನಿಷೇಧ ಜಾರಿಯಲ್ಲಿರಲಿದೆ.

ಗುಟ್ಕಾ, ಪಾನ್ ಮಸಾಲಾ, ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಇತರೆ ಉತ್ಪನ್ನಗಳು, ಈ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ/ಸಾಗಾಣಿಕೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿಶೇಷ ತಪಾಸಣೆ ಹಾಗೂ ಜಾರಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ ನಿಷೇಧಿತ ಉತ್ಪನ್ನಗಳನ್ನು ಮಾರಾಟ ಮಾಡುವ ಅಥವಾ ಸಂಗ್ರಹಿಸಿಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.

ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ. ನಿಮ್ಮ ಸುತ್ತಮುತ್ತ ಎಲ್ಲಾದರೂ ನಿಷೇಧಿತ ತಂಬಾಕು ಅಥವಾ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬAದಲ್ಲಿ ತಕ್ಷಣವೇ ಸಂಬAಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.