ಸುಂಟಿಕೊಪ್ಪ, ಆ. ೧೪: ಮುಖ್ಯಮಂತ್ರಿಯಾದ ಬಳಿಕ ತಾ. ೧೬ ರಂದು ಜಿಲ್ಲೆಗೆ ಪ್ರಥಮ ಬಾರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆ ಸುಂಟಿಕೊಪ್ಪದಲ್ಲಿ ಭಾನುವಾರದ ಸಂತೆಯನ್ನು ರದ್ದುಪಡಿಸಲಾಗಿದೆ.

ವಾರದ ಸಂತೆಗೆ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬರುವುದರಿಂದ ಮತ್ತು ವಾಹನಗಳ ದಟ್ಟಣೆ ಹೆಚ್ಚಾಗುವುದರಿಂದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಭಾನುವಾರ ನಡೆಯಬೇಕಿದ್ದ ಸಂತೆಯನ್ನು ರದ್ದುಪಡಿಸಿ ೧೭ರ ಸೋಮವಾರದಂದು ನಡೆಸುವಂತೆ ಗ್ರಾಮ ಪಂಚಾಯಿತಿ ಪ್ರಕಟಣೆ ತಿಳಿಸಿದೆ.