ಮಡಿಕೇರಿ, ಆ. ೧೪: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಹೆಚ್‌ಐವಿ/ಏಡ್ಸ್ ಜಾಗೃತಿ ಅಭಿಯಾನದ ಅಂಗವಾಗಿ ಅಂತರರಾಷ್ಟಿçÃಯ ಯುವ ದಿನಾಚರಣೆ ಪ್ರಯುಕ್ತ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವಜನರಲ್ಲಿ ಹೆಚ್‌ಐವಿ/ಏಡ್ಸ್ ಕುರಿತು ಅರಿವು ಮೂಡಿಸುವ ಹಾಗೂ ಏಡ್ಸ್ ಸುರಕ್ಷತಾ ಕಾರ್ಯಕ್ರಮದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಸನತ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಯುವಜನರಲ್ಲಿ ಹೆಚ್‌ಐವಿ/ ಏಡ್ಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಜಾಗೃತಿ, ಮುನ್ನೆಚ್ಚರಿಕೆ ಹಾಗೂ ಜವಾಬ್ದಾರಿಯುತ ಆರೋಗ್ಯ ನಡೆಗಳ ಮಹತ್ವವನ್ನು ವಿವರಿಸಿದರು. ಹೆಚ್‌ಐವಿ ಸೋಂಕಿನ ತಡೆಗಟ್ಟುವಿಕೆ ಮತ್ತು ನಿಯಂತ್ರಣದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ ಮಾತನಾಡಿ, ಹೆಚ್‌ಐವಿ/ಏಡ್ಸ್ಗೆ ಸಂಬAಧಿಸಿದ ಲಭ್ಯವಿರುವ ಸೇವೆಗಳು, ಪರೀಕ್ಷೆ ಹಾಗೂ ಸಮಾಲೋಚನಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಅಲ್ಲದೆ ಏಡ್ಸ್ ಸುರಕ್ಷತಾ ಕಾರ್ಯಕ್ರಮ, ಕ್ಯೂಆರ್ ಸಂಕೇತ ಸ್ಕಾö್ಯನ್ ಮಾಡುವ ಮೂಲಕ ಸೇವೆಗಳ ಕುರಿತು ಮಾಹಿತಿ ಪಡೆಯುವ ವಿಧಾನ, ಹೆಚ್‌ಐವಿ/ಏಡ್ಸ್ ಜಾಗೃತಿ ಕುರಿತ ಸೃಜನಾತ್ಮಕ ಕಿರುಚಿತ್ರ ಸ್ಪರ್ಧೆ ಹಾಗೂ ಯುವಜನರಿಗಾಗಿ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಜಾಗೃತಿ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ವೇಣುಗೋಪಾಲ್, ವಿದ್ಯಾರ್ಥಿಗಳಲ್ಲಿ ಹೆಚ್‌ಐವಿ/ಏಡ್ಸ್ ಕುರಿತು ವೈಜ್ಞಾನಿಕ ಅರಿವು ಮೂಡಿಸುವುದರೊಂದಿಗೆ ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನಶೈಲಿಯನ್ನು ಬೆಳೆಸುವುದು ಅಗತ್ಯವಾಗಿದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಅರಿವು ಹೆಚ್ಚಿಸುವುದರ ಜೊತೆಗೆ ಸಮಾಜದಲ್ಲಿ ಹೆಚ್‌ಐವಿ ತಡೆಗಟ್ಟುವ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗುತ್ತವೆ ಎಂದರು.

ರಾಷ್ಟಿçÃಯ ಸೇವಾ ಯೋಜನೆ ಅಧಿಕಾರಿ ಉದಯಕುಮಾರ್, ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಪ್ರತಿನಿಧಿಗಳು ಇತರರು ಇದ್ದರು.

ಅಂತರರಾಷ್ಟಿçÃಯ ಯುವ ದಿನಾಚರಣೆ ಹಾಗೂ ತೀವ್ರಗೊಳಿಸಿದ ಹೆಚ್‌ಐವಿ/ ಏಡ್ಸ್ ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಯುವಜನರಲ್ಲಿ ಹೆಚ್‌ಐವಿ/ಏಡ್ಸ್ ಕುರಿತು ವೈಜ್ಞಾನಿಕ ಅರಿವು ಮೂಡಿಸುವುದು, ಹೆಚ್‌ಐವಿ ಸೋಂಕಿನ ತಡೆಗಟ್ಟುವಿಕೆಯ ಕುರಿತು ಜಾಗೃತಿ ಹೆಚ್ಚಿಸುವುದು ಹಾಗೂ ಲಭ್ಯವಿರುವ ಆರೋಗ್ಯ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.