ಮಡಿಕೇರಿ, ಆ. ೧೪: ಬಾಡಗ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ, ಪೌಷ್ಟಿಕ ಆಹಾರ, ಆರೋಗ್ಯಕರ ಜೀವನ ಪದ್ಧತಿ ಹಾಗೂ ಇಲಾಖೆಯ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಮಾತನಾಡಿ, ಆಗಸ್ಟ್ ತಿಂಗಳಿನಲ್ಲಿ ತಾಲೂಕಿನಾದ್ಯಂತ ಪ್ರತಿ ಹಳ್ಳಿಯಲ್ಲೂ ಅಂಗನವಾಡಿ ಕೇಂದ್ರಗಳ ಮೂಲಕ ಸ್ತನ್ಯಪಾನದ ಮಹತ್ವದ ಕುರಿತು ವ್ಯಾಪಕ ಅರಿವು ಮೂಡಿಸಲಾಗುತ್ತಿದೆ. ತಾಯಿ ಮತ್ತು ಮಗುವಿನ ಆರೋಗ್ಯಕರ ಬೆಳವಣಿಗೆ ಹಾಗೂ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ವೈಜ್ಞಾನಿಕವಾಗಿ ಸಾಬೀತಾಗಿರುವ ಸ್ತನ್ಯಪಾನದ ಪ್ರಯೋಜನಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬAಧಿಸಿದAತೆ, ಫಲಾನುಭವಿಗಳು ಮರಣ ಹೊಂದಿದ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡುವುದರ ಜೊತೆಗೆ ರೇಷನ್ ಕಾರ್ಡ್ ಹಾಗೂ ಮರಣ ನೋಂದಣಿ ಪ್ರಮಾಣಪತ್ರವನ್ನು ಒದಗಿಸುವಂತೆ ಗ್ರಾಮಸ್ಥರಿಗೆ ತಿಳಿಸಲಾಯಿತು. ಫಲಾನುಭವಿಗಳು ಒಂದಕ್ಕಿAತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುವ ಸಂದರ್ಭದಲ್ಲಿಯೂ ಸಂಬAಧಿಸಿದ ಮಾಹಿತಿಯನ್ನು ಇಲಾಖೆಗೆ ನೀಡುವಂತೆ ತಿಳಿಸಲಾಯಿತು.

ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳ ಮೂಲಕ ಪ್ರತಿ ತಿಂಗಳು ದೊರೆಯುವ ಪೌಷ್ಟಿಕ ಆಹಾರ ಪದಾರ್ಥಗಳು ಹಾಗೂ ಅವುಗಳ ಸರಿಯಾದ ಬಳಕೆಯ ಕುರಿತು ಮಾಹಿತಿ ನೀಡಿದರು.

ಆಶಾ ಕಾರ್ಯಕರ್ತೆ ಚಂದ್ರಿಕಾ ಅವರು ಆರೋಗ್ಯ ಇಲಾಖೆಯ ವತಿಯಿಂದ ದೊರೆಯುವ ವಿವಿಧ ಆರೋಗ್ಯ ಸೇವೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ದಿವ್ಯ, ಗರ್ಭಿಣಿಯರು, ಬಾಣಂತಿಯರು, ಗ್ರಾಮಸ್ಥರು ಹಾಗೂ ಅಂಗನವಾಡಿ ಕೇಂದ್ರದ ಫಲಾನುಭವಿಗಳು ಭಾಗವಹಿಸಿದ್ದರು.

ಸ್ವಾಗತ ಹಾಗೂ ನಿರೂಪಣೆಯನ್ನು ಅಂಗನವಾಡಿ ಕಾರ್ಯಕರ್ತೆ ಜಯಂತಿ ನಿರ್ವಹಿಸಿದರು.