ಮಡಿಕೇರಿ, ಆ. ೧೩: ಅಂತರರಾಷ್ಟಿçÃಯ ಖ್ಯಾತಿಯ ಟೆನಿಸ್ ಆಟಗಾರ ಮಚ್ಚಂಡ ರೋಹನ್ ಬೋಪಣ್ಣ ಅವರು ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

೨೦೨೪ರ ಆಸ್ಟೆçÃಲಿಯನ್ ಓಪನ್ ಡಬಲ್ಸ್ ಚಾಂಪಿಯನ್ ಹಾಗೂ ವಿಶ್ವ ನಂ.೧ ಶ್ರೇಯಾಂಕ ಪಡೆದಿದ್ದ ಪದ್ಮಶ್ರೀ, ಏಕಲವ್ಯ, ಅರ್ಜುನ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ರೋಹನ್, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಕ್ರೀಡಾ ಕ್ಷೇತ್ರದ ಮಹತ್ವ ಹಾಗೂ ಕ್ರೀಡಾಪಟುವಾಗಲು ಕೈಗೊಳ್ಳಬೇಕಾದ ಪೂರ್ವ ತಯಾರಿ ಕುರಿತು ಸಲಹೆ ನೀಡಿದರು.

ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಾದರೂ ದೃಢ ಸಂಕಲ್ಪದಿAದ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಪ್ರತಿಯೊಬ್ಬರ ಜೀವನದಲ್ಲೂ ಅಡೆತಡೆಗಳು ಎದುರಾಗುವುದು ಸಹಜ. ಅವುಗಳನ್ನು ಮೆಟ್ಟಿ ನಿಂತು ಮುನ್ನಡೆಯಬೇಕು ಎಂದು ರೋಹನ್ ಬೋಪಣ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಮ್ಮ ‘ತ್ರಿದ ಫೌಂಡೇಶನ್’ ಮೂಲಕ ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವ ರೋಹನ್ ಬೋಪಣ್ಣ ಅವರ ಸೇವಾ ಕಾರ್ಯವನ್ನು ಶ್ರೀಮತಿ ಡಿ. ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿ.ಜಿ.ವಿ. ಕುಮಾರ್ ಶ್ಲಾಘಿಸಿದರು.

ಈ ಸಂದರ್ಭ ರೋಹನ್ ಬೋಪಣ್ಣ ಅವರ ಪತ್ನಿ ಸುಪ್ರಿಯ ಬೋಪಣ್ಣ, ಆಡಳಿತ ಮಂಡಳಿ ಸದಸ್ಯ ಮಂಜುನಾಥ್, ಪ್ರಾಂಶುಪಾಲ ಮಂದಪ್ಪ, ಮುಖ್ಯ ಶಿಕ್ಷಕಿ ರೀಟಾ ಹಾಗೂ ಉಪನ್ಯಾಸಕರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.