ಮಡಿಕೇರಿ, ಆ. ೧೫: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾ. ೧೬ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಹವಾಮಾನ ವೈಪರಿತ್ಯ ಇದ್ದಲ್ಲಿ ಹೆಲಿಕಾಪ್ಟರ್ ಮೂಲಕ ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಾರಂಗಿ ಹೆಲಿಪ್ಯಾಡ್‌ಗೆ ಆಗಮಿಸಿ ನಂತರ ರಸ್ತೆ ಮಾರ್ಗವಾಗಿ ರಾಷ್ಟಿçÃಯ ಹೆದ್ದಾರಿ ೨೭೫ರ ಮೂಲಕ ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ - ಭಾಗಮಂಡಲದ ಕಡೆಗೆ ತೆರಳುವ ಸಾಧ್ಯತೆಗಳಿರುವುದರಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯ ರಸ್ತೆಯ ಎರಡೂ ಬದಿಗಳಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ.

ಸಂತೆ ರದ್ದು ಇಲ್ಲ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೊಡಗು ಜಿಲ್ಲೆಯ ಭೇಟಿ ಹಿನ್ನೆಲೆಯಲ್ಲಿ ಗಣ್ಯರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ತಾ. ೧೬ ರಂದು ಸುಂಟಿಕೊಪ್ಪದಲ್ಲಿ ಸಂತೆಯನ್ನು ರದ್ದುಪಡಿಸಿ ಗ್ರಾಮ ಪಂಚಾಯಿತಿ ನೆನ್ನೆ ದಿನ ಹೊರಡಿಸಲಾಗಿದ್ದ ಆದೇಶವನ್ನು ಶಾಸಕ ಡಾ. ಮಂತರ್ ಗೌಡ ಅವರ ಸೂಚನೆ ಹಾಗೂ ಸಾರ್ವಜನಿಕರ ಮನವಿ ಮೇರೆಗೆ ಹಿಂತೆಗೆದುಕೊಳ್ಳಲಾಗಿದೆ.

ಮುಖ್ಯಮAತ್ರಿಗಳು ನೇರವಾಗಿ ಭಾಗಮಂಡಲಕ್ಕೆ ಹೆಲಿಕಾಪ್ಟರ್‌ನಲ್ಲಿ ಬರಲಿರುವ ಮಾಹಿತಿ ದೊರೆತಿದ್ದರಿಂದ ಮಂತರ್ ಗೌಡ ಅವರ ಸೂಚನೆ ಹಾಗೂ ಸಾರ್ವಜನಿಕರ ಮನವಿ ಮೇರೆಗೆ ಗ್ರಾಮ ಪಂಚಾಯಿತಿ ತಾ. ೧೬ ರಂದು ಎಂದಿನAತೆ ಸಂತೆಗೆ ಅನುವು ಮಾಡಿಕೊಟ್ಟಿದೆ.

ಆದರೆ ಸುಂಟಿಕೊಪ್ಪ ಪಟ್ಟಣದಲ್ಲಿ ಹೆದ್ದಾರಿ ಬದಿಯಲ್ಲಿ ಮತ್ತು ವಾಹನಗಳಲ್ಲಿ ಸಂತೆ ಸಾಮಾಗ್ರಿಗಳನ್ನಿಟ್ಟು ವ್ಯಾಪಾರ ಮಾಡದಂತೆ ಗ್ರಾಮ ಪಂಚಾಯಿತಿ ಕಟ್ಟುನಿಟ್ಟಾಗಿ ಸೂಚಿಸಿದೆ.