ಗೋಣಿಕೊಪ್ಪಲು, ಆ.೧೫: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ, ಮೊದಲ ಬಾರಿಗೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೊಡಗಿನ ಗಡಿಭಾಗ ತಿತಿಮತಿ ಆನೆ ಚೌಕೂರು ಗೇಟ್ ಬಳಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡರು.
ಪೊನ್ನAಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಮುಂದಾಳತ್ವದಲ್ಲಿ ಪಕ್ಷದ ಅನೇಕ ಮುಖಂಡರು ಗಡಿಭಾಗದಲ್ಲಿ ಹೂ ಗುಚ್ಛ ನೀಡಿ ಸ್ವಾಗತ ಕೋರಿದರು.
ಕೆಪಿಸಿಸಿ ಸದಸ್ಯರು, ಡಿಸಿಸಿ ಸದಸ್ಯರು ಸೇರಿದಂತೆ ಶಾಸಕ ಪೊನ್ನಣ್ಣ ಅವರ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಟಾಟು ಮೊಣ್ಣಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು, ಮಹಿಳಾ ಘಟಕ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಹೂ ಮಳೆ ಸ್ವಾಗತ
ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಗೋಣಿಕೊಪ್ಪಲುವಿನ ನೂತನ ಬಸ್ ನಿಲ್ದಾಣದಲ್ಲಿ, ಹೂ ಮಳೆ ಸುರಿಸುವ ಮೂಲಕ ಸ್ವಾಗತ ಕೋರಲಾಯಿತು.
ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ನಾಮೇರ ಅಂಕಿತ್ ಪೊನ್ನಪ್ಪ ಸಮ್ಮುಖದಲ್ಲಿ ಎರಡು ಜೆಸಿಬಿಗಳ ಸಹಾಯದಿಂದ ಕ್ವಿಂಟಾಲ್‌ಗಟ್ಟಲೆ ಹೂವನ್ನು ಶಾಸಕ ಪೊನ್ನಣ್ಣ ಅವರಿಗೆ ಸುರಿಯುವ ಮೂಲಕ ಸ್ವಾಗತ ಕೋರಲಾಯಿತು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಎ.ಎಸ್.ಪೊನ್ನಣ್ಣ, ಕಾರ್ಯಕರ್ತರ ಅಭಿಮಾನ, ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದರಲ್ಲದೆ ಮುಖ್ಯಮಂತ್ರಿಗಳು ಸಂಪುಟ ದರ್ಜೆಯ ಸ್ಥಾನ ಮಾನದೊಂದಿಗೆ ರಾಜಕೀಯ ಕಾರ್ಯದರ್ಶಿಯಾಗಿ ಜವಾಬ್ದಾರಿ ನೀಡಿದ್ದಾರೆ. ಇದನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವಿದೆ, ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ವಿಶ್ವಾಸ ಹೆಚ್ಚಾಗಿದ್ದು, ಕ್ಷೇತ್ರದ ಪ್ರಗತಿಗೆ ಮತ್ತಷ್ಟು ಶ್ರಮಿಸುವೆ ಎಂದು ಭರವಸೆ ನೀಡಿದರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಪಕ್ಷದ ಪ್ರಮುಖರಾದ ನಾಯಂದಿರ ಶಿವಾಜಿ, ಖಾಲಿದ್, ಸಮೀರ್, ಅಶ್ರಫ್, ಮೆಹಬೂಬ್, ಎಂ.ಮAಜುಳ, ನೂರೇರ ಧನ್ಯ ರವೀಂದ್ರ, ಸುಶೀಲಾ, ಯಾಶ್ಮಿನ್, ಮಂಜು ಸೇರಿದಂತೆ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.