ಸುಂಟಿಕೊಪ್ಪ, ಆ. ೧೫: “ಗದ್ದೆಹಳ್ಳದಲ್ಲಿ ಗದ್ದೆ ಆಟ” ಸಂಘದ ಆಶ್ರಯದಲ್ಲಿ ತಾ ೧೬ ರಂದು(ಇAದು) ೨ನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಪಟ್ಟೆಮನೆ ಚರಣ್, ಉಪಾಧ್ಯಕ್ಷರಾದ ಯಂಕನ ಶ್ರೀರಾಂ, ಕಾರ್ಯದರ್ಶಿ ಯಂಕನ ಗಿರೀಶ್, ಜಂಟಿ ಕಾರ್ಯದರ್ಶಿ ಸೋಮಶೇಖರ್ ಮತ್ತು ಖಾಜಾಂಚಿ ಪಟ್ಟೆಮನೆ ಭಾರ್ಗವ ತಿಳಿಸಿದ್ದಾರೆ.
ಪಟ್ಟೆಮನೆ ಉದಯಕುಮಾರ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದ್ದು, ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಮತ್ತು ಪುರುಷರಿಗೆ ಹಾಗೂ ಮಹಿಳೆಯರಿಗೆ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ವಿಜೇತರಾಗುವ ತಂಡಕ್ಕೆ ಪ್ರಥಮ ಬಹುಮಾನವಾಗಿ ರೂ.೧೫ ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ದೊರೆಯಲಿದೆ. ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ಬಹುಮಾನವಾಗಿ ರೂ.೭ ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ಸಿಗಲಿದೆ.