ಕೂಡಿಗೆ, ಆ. ೧೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಿತಿ ಮೀರಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಆಗ್ರಹಿಸಿ ತಾ. ೧೭ ರಂದು (ಇಂದು) ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರು, ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿ ನಾಯಿಗಳ ದಾಳಿಯಿಂದ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಹಲವು ಬಾರಿ ಅನಾಹುತಗಳು ಸಂಭವಿಸಿವೆ. ಬೀದಿ ನಾಯಿಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವುದು, ಸಂತಾನ ನಿಯಂತ್ರಣ ಶಸ್ತçಚಿಕಿತ್ಸೆ ಸೇರಿದಂತೆ ಅಗತ್ಯ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪಂಚಾಯಿತಿ ಹಾಗೂ ಸಂಬAಧಿಸಿದ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರಾದ ರಂಗಣ್ಣ ತಿಳಿಸಿದ್ದಾರೆ.