ವೀರಾಜಪೇಟೆ, ಆ. ೧೭: ವೀರಾಜಪೇಟೆಯ ಐತಿಹಾಸಿಕ ಜನೋತ್ಸವ ಸಮಿತಿ ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರುಗಳು, ಸದಸ್ಯರುಗಳು, ಪದಾಧಿಕಾರಿಗಳೊಂದಿಗೆೆ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಭೆ ನಡೆಸಿದರು.
ಕಾರ್ಯಾಧ್ಯಕ್ಷ ಶಬರೀಶ್ ಶೆಟ್ಟಿ ಉಪಸ್ಥಿತಿಯಲ್ಲಿ ಮುಂಬರುವ ಗಣೇಶ ಚತುರ್ಥಿ ಸಂಬAಧ ವಿವಿಧ ಕಾರ್ಯಕ್ರಮಗಳನ್ನು ವೀರಾಜಪೇಟೆ ಪುರಸಭೆ ವ್ಯಾಪ್ತಿಯಾದ್ಯಂತ ಹಮ್ಮಿಕೊಳ್ಳಲಾಗಿದ್ದು ಅದರ ಯಶಸ್ವಿ ನಡವಳಿಗಳ ಬಗ್ಗೆ ಹಾಗೂ ವಿವಿಧ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸುಸೂತ್ರವಾಗಿ ಗಣೇಶೋ ತ್ಸವವನ್ನು ನಡೆಸುವ ನಿಟ್ಟಿನಲ್ಲಿ ಶಾಸಕರು ಹಲವು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರಲ್ಲದೆ ವಿವಿಧ ಸಮಿತಿಗಳ ಪ್ರಸ್ತಾವನೆಗಳನ್ನು ಕೂಲಂಕಷವಾಗಿ ಆಲಿಸಿದರು.
ಬಹು ದಿನಗಳ ಕಾಲ ನಡೆಯುವ ಗಣೇಶೋತ್ಸವವನ್ನು ಜನಸಾಮಾನ್ಯರಿಗೆ ತೊಂದರೆಯಾಗದAತೆ ನಿಭಾಯಿಸುವ ಬಗ್ಗೆ ಹಾಗೂ ಯಾವುದೇ ಗೊಂದಲಗಳಿಗೆ ಆಸ್ಪದ ಇಲ್ಲದೆ ಯಶಸ್ವಿಗೊಳಿಸುವ ಕುರಿತು ಗಂಭೀರವಾಗಿ ಚರ್ಚೆ ಕೈಗೊಳ್ಳಲಾಯಿತು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಯನಾ ಜಗತ್, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಮತೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.