ಸಿದ್ದಾಪುರ, ಆ. ೧೭: ಸರ್ಕಾರಿ ಶಾಲೆಯ ಉಳಿವಿಗಾಗಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಲಿಕಾ ಸಾಮಗ್ರಿಗಳನ್ನು ವಿತರಿಸಿಕೊಂಡು ಬರಲಾಗುತ್ತಿದ್ದು ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಬನವಾಸಿ ಕನ್ನಡಿಗರು, ಕನ್ನಡಮಯ ಟ್ರಸ್ಟ್ ಅಧ್ಯಕ್ಷ ಜೈ ಕಿರಣ್ ಕರೆ ನೀಡಿದರು.
ವೀರಾಜಪೇಟೆ ತಾಲೂಕಿನ ಮಾಲ್ದಾರೆ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ U.Sಖಿ ಸಂಸ್ಥೆ ಬೆಂಗಳೂರು, ಬನವಾಸಿ ಕನ್ನಡಿಗರು, ಕನ್ನಡಮಯ ಟ್ರಸ್ಟ್ ಬೆಂಗಳೂರು, ನಮ್ಮ ಕೊಡಗು ತಂಡ ಮತ್ತು ಕೊಡಗು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇದುವರೆಗೂ ೧೦ಕ್ಕೂ ಹೆಚ್ಚು ಶಾಲೆಗಳ ೬೦೦ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡಲಾಗಿದೆ ಎಂದರು.
ಪತ್ರಕರ್ತರ ಸಹಕಾರದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಗುರುತಿಸಲು ಸಾಧ್ಯವಾಗಿದೆ ಎಂದು ಹೇಳಿದ ಅವರು, ಪ್ರಕೃತಿ ಸೌಂದರ್ಯದಿAದ ಕೂಡಿರುವ ಕೊಡಗು ಜಿಲ್ಲೆಯಿಂದ ಬೆಂಗಳೂರು ಜನರ ದಾಹ ನೀಗಿಸಲು ಕಾವೇರಿ ನೀರು ಸಿಗುತ್ತಿದ್ದು ಮಣ್ಣಿನ ಋಣ ತೀರಿಸಲು ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಸರ್ಕಾರಿ ಶಾಲೆಯ ಉಳಿವಿನೊಂದಿಗೆ ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣ ಕಲಿಯುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳ ಶಿಕ್ಷಣ ಕಲಿಕೆಗೆ ದಾನಿಗಳು ಹೆಚ್ಚಿನ ಸಹಕಾರ ನೀಡಬೇಕಾಗಿದೆ ಎಂದರು. ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಸತೀಶ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೆಚ್ಚಾಗಿ ಆಗಮಿಸುತ್ತಿದ್ದು ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ನೆರವಾಗಲು ಸರ್ಕಾರಗಳು ಹಾಗೂ ವಿವಿಧ ಸಮಾಜ ಸೇವಾ ಸಂಸ್ಥೆಗಳು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಶಿಕ್ಷಣದ ಮೂಲಕ ಮುಖ್ಯ ವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.
ಬನವಾಸಿ ಕನ್ನಡಿಗರು, ಕನ್ನಡಮಯ ಟ್ರಸ್ಟ್ನ ಪ್ರಮುಖರಾದ ಶಮಂತ್ ಹೊಸಹೊಳಲು ಮಾತನಾಡಿ, ಪ್ರಕೃತಿ ಸೌಂದರ್ಯವನ್ನು ಉಳಿಸಿ ಬೆಳೆಸಲು ಪರಿಸರ ರಕ್ಷಣೆಗೆ ಎಲ್ಲರೂ ಕೈಜೋಡಿಸುವುದರ ಮೂಲಕ ಆಚಾರ-ವಿಚಾರ, ಸಂಸ್ಕೃತಿ- ಪರಂಪರೆಯನ್ನು ಮುಂದಿನ ಪೀಳಿಗೆಗೂ ಪರಿಚಯಿಸಬೇಕೆಂದರು.
ಈ ಸಂದರ್ಭ ಯು.ಎಸ್.ಟಿ ಸಂಸ್ಥೆಯ ಸಿ.ಎಸ್.ಆರ್ ಹೆಡ್ ಸೃಷ್ಟಿ, ವಿಶ್ವಾಸ್, ಶ್ರೀವಸ್ತವ, ನಿಪುನ್, ನಿತಿನ್, ಮನು, ಬನವಾಸಿ ಕನ್ನಡಿಗರು ಕನ್ನಡಮಯ ಟ್ರಸ್ಟ್, ಕಿರಣ್ಮಯಿ, ತೇಜಸ್, ಧರಣಿ ರೆಡ್ಡಿ, ಧನುಷ್ ಕುಮಾರ್, ಸಮಾಜ ಸೇವಕ ಸುರೇಶ್, ಜನಪರ ಸಂಘದ ಅಧ್ಯಕ್ಷ ಬಾವ ಮಾಲ್ದಾರೆ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರುಗಳಾದ ಸೈಯದ್ ಉಸ್ಮಾನ್, ಪ್ರೀಜಾ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಇಂದಿರಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಈಶ್ವರಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜೇಶ್, ಕೊಡಗು ಪತ್ರಕರ್ತರ ಸಂಘದ ಗುರುದರ್ಶನ್, ಎಸ್.ಎಂ ಮುಬಾರಕ್ ಎಂ.ಎಸ್ ಸೈನುಲ್ಲಾ, ಚೆಪ್ಪುಡಿರ ರೋಷನ್, ಖಲೀಲ್ ಸೇರಿದಂತೆ ಶಿಕ್ಷಕರುಗಳು, ವಿದ್ಯಾರ್ಥಿಗಳು, ಧರ್ಮಸ್ಥಳ ಸಂಘದ ಪ್ರಮುಖರು ಉಪಸ್ಥಿತರಿದ್ದರು.