ಶನಿವಾರಸಂತೆ, ಆ. ೧೭: ಅರ್ಚಕರ ಹಿತಾಸಕ್ತಿ, ಕಲ್ಯಾಣ ಹಾಗೂ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶ ದಿಂದ ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತ ಸಂಘ (ರಿ.) ಹಾಗೂ ಅಖಿಲ ಭಾರತ ಅರ್ಚಕರ ಸಂಘದ ವತಿಯಿಂದ ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಂಘವನ್ನು ಮತ್ತಷ್ಟು ಬಲಪಡಿಸುವ ಮೂಲಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರನ್ನು ಸಂಘದೊAದಿಗೆ ಸಂಪರ್ಕಿಸುವ ಕಾರ್ಯ ಕೈಗೊಳ್ಳಲಾಗಿದೆ. ಅರ್ಚಕರ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸಿ, ಅವುಗಳನ್ನು ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂಘದ ಸದಸ್ಯತ್ವ ಪಡೆಯುವ ಅರ್ಚಕರಿಗೆ ಗುರುತಿನ ಚೀಟಿ, ವಿಮಾ ಸೌಲಭ್ಯ, ಹೆಲ್ತ್ ಸ್ಕಿçÃನ್ ಕಾರ್ಡ್ ಸೇರಿದಂತೆ ವಿವಿಧ ಆರೋಗ್ಯ ಸಂಬAಧಿತ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ಸದಸ್ಯರ ಕುಟುಂಬದವರಿಗೆ ಅಗತ್ಯ ಸಂದರ್ಭಗಳಲ್ಲಿ ನೆರವು ನೀಡುವ ನಿಟ್ಟಿನಲ್ಲಿಯೂ ಸಂಘ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿದೆ.
ಅರ್ಚಕರಿಗೆ ಎದುರಾಗುವ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಸಂಘದ ಮೂಲಕ ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಅವುಗಳಿಗೆ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅರ್ಚಕರ ಹಕ್ಕು, ಹಿತಾಸಕ್ತಿ ಹಾಗೂ ಕಲ್ಯಾಣಕ್ಕಾಗಿ ಸಂಘಟಿತರಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಸಂಘ ತಿಳಿಸಿದೆ. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅರ್ಚಕರನ್ನು ಸಂಘದೊAದಿಗೆ ಸಂಪರ್ಕಿಸುವ ಕಾರ್ಯ ಮುಂದುವರಿದಿದ್ದು, ಜಿಲ್ಲೆಯ ಎಲ್ಲಾ ಅರ್ಚಕರು ಸಂಘದ ಸದಸ್ಯತ್ವ ಪಡೆದು ಸಂಘವನ್ನು ಮತ್ತಷ್ಟು ಬಲಪಡಿಸುವಂತೆ ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತ ಸಂಘದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಮತ್ತು ರಾಜ್ಯ ನಿರ್ದೇಶಕರಾದ ವೇದಮೂರ್ತಿ ಸೋಮಶೇಖರ್ ಶಾಸ್ತಿçಗಳನ್ನು ಸಂಪರ್ಕಿಸಬಹುದು :ಮೊ:೯೧೪೮೯೪೬೦೯೫.