ಮಡಿಕೇರಿ, ಆ. ೧೭: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವಕ್ಫ್, ಹಜ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಡಾ. ಯು.ಟಿ. ಖಾದರ್ ಫರೀದ್ ಅವರು ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಸಂದರ್ಭದಲ್ಲಿ ಮೇಕೇರಿ ದರ್ಗಾಕ್ಕೆ ಭೇಟಿ ನೀಡಿ, ದರ್ಗಾದಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಿದರು. ಅಲ್ಲಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ದರ್ಗಾದ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸ್ಥಳೀಯರ ಸಮಸ್ಯೆಗಳು ಹಾಗೂ ಅಗತ್ಯಗಳ ಬಗ್ಗೆಯೂ ಮಾಹಿತಿ ಪಡೆದರು. ಸಚಿವರ ಭೇಟಿ ಸಂದರ್ಭ ಅಶ್ರಫ್ ಎಂ.ಇ., ಮೇಕೇರಿ ಪಂಚಾಯಿತಿ ಮಾಜಿ ಅಧ್ಯಕ್ಷÀ ಹನೀಫ್, ಮಸೀದಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.