ಮಡಿಕೇರಿ, ಆ. ೧೭: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರಕಾರ ಹಾಗೂ ನಾಗೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಸಚಿವ ಸಂಪುಟ ವಿಸ್ತರಣೆಯಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ನಾಗೇಂದ್ರ ಅವರಿಗೆ ಸ್ಥಾನ ನೀಡಲಾಗಿದೆ. ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆಸಿದ ಅಪಾದನೆ ಅವರ ಮೇಲಿದ್ದು, ೮೭ ಕೋಟಿ ದುರುಪಯೋಗವಾಗಿದೆ ಎಂದು ಸರಕಾರವೇ ಹೇಳಿದೆ. ತನಿಖೆ ಪ್ರಗತಿಯಲ್ಲಿರುವಾಗ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ. ಈ ಸಂಬAಧ ತನಿಖೆ ಮಾಡಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ನಗರಸಭಾಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ನಗರಸಭಾ ಸದಸ್ಯರುಗಳಾದ ಸಬಿತಾ, ಸತೀಶ್, ಅನಿತಾ ಪೂವಯ್ಯ, ಅರುಣ್ ಶೆಟ್ಟಿ, ಕಾಳಚಂಡ ಅಪ್ಪಣ್ಣ, ಪ್ರಮುಖರಾದ ಶಾಂತೆಯAಡ ರವಿ ಕುಶಾಲಪ್ಪ, ಬಿ.ಕೆ. ಜಗದೀಶ್, ಕನ್ನಂಡ ಸಂಪತ್ ಸೇರಿದಂತೆ ಇನ್ನಿತರರು ಹಾಜರಿದ್ದರು.