ವೀರಾಜಪೇಟೆ, ಆ. ೧೮: ಕೊಡಗು ಪತ್ರಕರ್ತರ ಸಂಘ ಮತ್ತು ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ತಾ. ೧೯ ರಂದು (ಇಂದು) ಸಂತ ಅನ್ನಮ್ಮ ಪದವಿ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಯೋಜಿಸಲಾಗಿದೆ.
ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮದೆsÀÆÃಷ್ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಹೆಸರಾಂತ ಪಕ್ಷಿ ಛಾಯಾಗ್ರಾಹಕ ಡಾ. ಎಸ್.ವಿ. ನರಸಿಂಹನ್ ಉದ್ಘಾಟಿಸಲಿದ್ದು, ದೇವನಹಳ್ಳಿಯ ಸಮಾಜಸೇವಕ ಮಂಡಿಬೆಲೆ ರಾಜಣ್ಣ, ವೀರಾಜಪೇಟೆ ಅಕ್ರಮ - ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಸಲಾಂ, ಮಾಜಿ ಯೋಧ ಎಂ.ಕೆ. ಸಲಾಂ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್, ಸಂತ ಅನ್ನಮ್ಮ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು, ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.
ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಗುಡ್ಡೆಮನೆ ವಿಶ್ವ ಮತ್ತು ಮುಕ್ಕಾಟಿರ ಡೀನಾ ಪೂವಣ್ಣ ಅವರಿಂದ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ ಎಂದು ವೀರಾಜಪೇಟೆ ತಾಲೂಕು ಸಂಘದ ಕಾರ್ಯದರ್ಶಿ ಉಷಾ ಪ್ರೀತಮ್ ತಿಳಿಸಿದ್ದಾರೆ.