ಚೆಯ್ಯಂಡಾಣೆ: ಸಮೀಪದ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು.

ಧ್ವಜಾರೋಹಣವನ್ನು ಎಸ್‌ಡಿಎಂಸಿ ಅಧ್ಯಕ್ಷೆ ಎಂಬಿ ನೇತ್ರಾವತಿ ನೆರವೇರಿಸಿದರು. ಕರಡ ಶಾಲೆಯಿಂದ ಮುಖ್ಯ ಬೀದಿಗಳಲ್ಲಿ ಸ್ವಾತಂತ್ರ‍್ಯ ಹೋರಾಟಗಾರರಿಗೆ ಜೈಕಾರ ಕೂಗುತ್ತ ಮೆರವಣಿಗೆ ತೆರಳಿದರು.

ನಂತರ ಎಸ್ ಡಿಎಂಸಿ ಅಧ್ಯಕ್ಷೆ ನೇತ್ರಾವತಿ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಡಿ.ಕೆ.ಲೀಲಾವತಿ ದಿನದ ಮಹತ್ವದ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆ, ಗಾಯನ, ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಸಲಹಾ ಸಮಿತಿಯ ಸದಸ್ಯರಾದ ಐತಿಚಂಡ ಸುಬ್ರಮಣಿ, ಬೇಪಡಿಯಂಡ ಬಿದ್ದಪ್ಪ, ಎಸ್ ಡಿಎಂಸಿ ಉಪಾಧ್ಯಕ್ಷೆ ಎಚ್.ಆರ್. ಮಂಜುಳಾ, ಸದಸ್ಯೆ ಬಿಂದು, ಅತಿಥಿ ಶಿಕ್ಷಕಿ ಫಶೀಲಾ, ಅಂಗನವಾಡಿ ಕಾರ್ಯಕರ್ತೆ ಈಶ್ವರಿ, ಆಶಾ ಕಾರ್ಯಕರ್ತೆ ಪುಷ್ಪಲತಾ, ಸಹಾಯಕಿ ಶೋಭಾ, ಶಾಲೆಯ ಸಿಬ್ಬಂದಿಗಳು, ಪೋಷಕರು ವೃಂದದವರು, ಮತ್ತಿತರರು ಉಪಸ್ಥಿತರಿದ್ದರು.ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.

ಮುಖ್ಯ ಶಿಕ್ಷಕಿ ಲೀಲಾವತಿ ಸ್ವಾಗತಿಸಿ, ವಂದಿಸಿದರು.