ಮಡಿಕೇರಿ, ಆ. ೧೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ವೀರಾಜಪೇಟೆ, ಸೋಮವಾರಪೇಟೆ, ಮಡಿಕೇರಿ ತಾಲೂಕು ಯುವ ಒಕ್ಕೂಟ ಹಾಗೂ ಅಯ್ಯಂಗೇರಿ ಶ್ರೀ ಕೃಷ್ಣ ಯೂತ್ ಕ್ಲಬ್ ವತಿಯಿಂದ ೩೪ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ತಾ. ೨೨ ರಂದು ಭಾಗಮಂಡಲದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವ ಒಕ್ಕೂಟ ನಿಕಟ ಪೂರ್ವ ಅಧ್ಯಕ್ಷ ಪಿ.ಪಿ. ಸುಕುಮಾರ್ ಮಾಹಿತಿ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು ಅವರ ಗದ್ದೆಯಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷರ ಹಾಗೂ ಮಹಿಳೆಯರ ವಿಭಾಗದ ಹಗ್ಗಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, ಪುರುಷರಿಗೆ ವಾಲಿಬಾಲ್, ೧ ರಿಂದ ೪ನೇ ತರಗತಿ, ೫ ರಿಂದ ೭ನೇ ತರಗತಿ, ೮ ರಿಂದ ೧೦ನೇ ತರಗತಿ, ಪದವಿ, ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ವಿಭಾಗ, ಸಾರ್ವಜನಿಕ ಪುರುಷ ಹಾಗೂ ಮಹಿಳೆಯರಿಗೆ, ಆಯೋಜಕರಿಗಾಗಿ ಹೀಗೆ ವಿವಿಧ ವಿಭಾಗದಲ್ಲಿ ಓಟದ ಸ್ಪರ್ಧೆ ಆಯೋಜಿಸಲಾಗಿದೆ ಎಂದು ವಿವರಿಸಿದರು.

ತಾ. ೨೧ ರ ಸಂಜೆ ೫ ಗಂಟೆಯೊಳಗೆ ತಂಡಗಳನ್ನು ನೋಂದಾಯಿಸಿಕೊಳ್ಳುವAತೆ ಕೋರಿದ ಅವರು ಹೆಚ್ಚಿನ ಮಾಹಿತಿಗೆ ೬೩೬೧೬೨೧೬೪೩. ಅಥವಾ ೯೮೪೫೦೫೩೫೦೧ ಸಂಪರ್ಕಿಸುವAತೆ ತಿಳಿಸಿದರು.

ಮಡಿಕೇರಿ ತಾಲೂಕು ಯುವ ಒಕ್ಕೂಟ ಅಧ್ಯಕ್ಷ ಬಾಲಾಡಿ ದಿಲೀಪ್ ಕುಮಾರ್ ಮಾತನಾಡಿ, ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಕ್ಕೆ ಜನಪ್ರತಿನಿಧಿಗಳು, ಪ್ರಮುಖರು, ಅಧಿಕಾರಿಗಳು, ಉದ್ಯಮಿಗಳು, ಸಂಘ-ಸAಸ್ಥೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಶ್ರೀ ಕೃಷ್ಣ ಯುವಕ ಸಂಘದ ಗೌರವಾಧ್ಯಕ್ಷ ಜೀವನ್ ಕುಮಾರ್, ಕಾರ್ಯದರ್ಶಿ ಬಿ.ಸಿ. ಅಭಿಜಿತ್, ಸದಸ್ಯರುಗಳಾದ ಬಿದ್ದಿಯಂಡ ಸುಭಾಷ್, ಬಿದ್ದಿಯಂಡ ಮಂಜು, ಇದ್ದರು.