ಮಡಿಕೇರಿ, ಆ. ೧೮: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರ ಕುಂದುಕೊರತೆ ಸಭೆಯು ತಾ. ೨೦ ರಂದು (ನಾಳೆ) ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿಶೇಷ ಚೇತನರು ಭಾಗವಹಿಸಿ ಕುಂದು ಕೊರತೆ ಸಭೆಯ ಪ್ರಯೋಜನ ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.