ಮಡಿಕೇರಿ, ಆ. ೧೮: ಕರ್ನಾಟಕ ರಕ್ಷಣಾ ವೇದಿಕೆ ಮಡಿಕೇರಿ ತಾಲೂಕಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಡಿಕೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಪ್ರವೀಣ್ ಡಿಂಗ, ಉಪಾಧ್ಯಕ್ಷರಾಗಿ ರಘು, ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್, ಗೌರವಾಧ್ಯಕ್ಷರಾಗಿ ಶರೀಫ್, ಸಂಚಾಲಕರಾಗಿ ಪಿ.ಎ ಜೋಸ್, ಉಪಾಧ್ಯಕ್ಷರಾಗಿ ಸಿಯಾಬುದ್ದೀನ್, ನಗರ ಅಧ್ಯಕ್ಷರಾಗಿ ಫೈಯಾಜ್, ಮಹಿಳಾ ಉಪಾಧ್ಯಕ್ಷರಾಗಿ ನನೂತ, ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪ, ಸಂಚಾಲಕರಾಗಿ ಸರಿತಾ, ಸಂಘಟನಾ ಕಾರ್ಯದರ್ಶಿಯಾಗಿ ಹೇಮಲತಾ, ಕಾರ್ಮಿಕ ಘಟಕದ ಮಹಿಳಾಧ್ಯಕ್ಷೆಯಾಗಿ ದೀಪ್ತಿ ಅವರುಗಳನ್ನು ಆಯ್ಕೆ ಮಾಡ ಲಾಯಿತು. ಸಂಘಟನೆಯ ಬಲವರ್ಧನೆ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳು, ಹಾಗೂ ಕನ್ನಡ ನಾಡು, ನುಡಿ ಮತ್ತು ನೆಲ-ಜಲದ ಪರವಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆ ಯಲ್ಲಿ ಕರವೇ ಕೊಡಗು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಹಾಜರಿದ್ದರು. ಜಿಲ್ಲಾ ಸಂಚಾಲಕರಾದ ಗೋವಿಂದರಾಜ್ ದಾಸ್ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಕುದುಪಜೆ ಸಂಘಟನೆ ನೆಡೆದುಬಂದ ಹಾದಿಯನ್ನು ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಮುನೀರ್ ಮಾಚಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.