ಪೊನ್ನಂಪೇಟೆ: ಕೊಡವ ಎಜುಕೇಶನ್ ಸೊಸೈಟಿಯ ಅಧೀನಕ್ಕೊಳಪಡುವ ಸಿ.ಐ.ಟಿ. ಮತ್ತು ಸಿ.ಐ.ಪಿ.ಯು. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ೮೦ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸಿ.ಪಿ. ರಾಕೇಶ್ ಪೂವಯ್ಯ ಮಾತನಾಡಿ, ದೇಶದ ಪ್ರಗತಿಗೆ ಪ್ರತಿಯೊಬ್ಬ ನಾಗರಿಕರೂ ತಮ್ಮ ಕೊಡುಗೆ ನೀಡಬೇಕು ಎಂದರು.
ಸಿ.ಐ.ಟಿ. ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಬಸವರಾಜ್ ಮಾತನಾಡಿ, ತಂತ್ರಜ್ಞಾನದ ಬೆಳವಣಿಗೆಯನ್ನು ದುರುಪಯೋಗಪಡಿಸಿಕೊಳ್ಳದೆ ದೇಶದ ಪ್ರಗತಿಗೆ ಬಳಸಬೇಕು ಎಂದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಮೂಡಿಬಂದಿತು. ಕಾರ್ಯಕ್ರಮದಲ್ಲಿ ಸಿ.ಐ.ಪಿ.ಯು ಕಾಲೇಜಿನ ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ, ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್ ಕುಮಾರ್, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಎನ್‌ಸಿಸಿ ಕೆಡೆಟ್‌ಗಳು ಪಾಲ್ಗೊಂಡಿದ್ದರು.