ಮಡಿಕೇರಿ, ಆ. ೧೮: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಮಡಿಕೇರಿ ನಗರ ಮಂಡಲ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರಕಾರ ಹಾಗೂ ನಾಗೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಜಿಲ್ಲಾ ವಕ್ತಾರ ಬಿ.ಕೆ. ಅರುಣ್ ಕುಮಾರ್, ನಗರಸಭಾಧ್ಯಕ್ಷೆ ಕಲಾವತಿ, ಯುವ ಮೋರ್ಚಾ ಅಧ್ಯಕ್ಷ ಪಾಂಡಿರ ಪೂಣಚ್ಚ, ಒಬಿಸಿ ಮೋರ್ಚಾ ಅಧ್ಯಕ್ಷ ಗಜೇಂದ್ರ ಕುಶ, ಉಪಾಧ್ಯಕ್ಷ ಸಚಿನ್ ಸೇರಿದಂತೆ ಇನ್ನಿತರರು ಹಾಜರಿದ್ದರು.