ಮಡಿಕೇರಿ, ಆ. ೧೮: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು, ಮಡಿಕೇರಿ ವತಿಯಿಂದ ಮಡಿಕೇರಿಯ ಶ್ರೀ ಲಕ್ಷಿö್ಮÃ ನರಸಿಂಹ ಕಲ್ಯಾಣ ಮಂಟಪದಲ್ಲಿ ತಾ. ೨೬ ರಂದು ಬೆಳಿಗ್ಗೆ ೭:೩೦ ಗಂಟೆಗೆ ಋಗುಪಕರ್ಮ ಹಾಗೂ ತಾ. ೨೮ ರಂದು ಬೆಳಿಗ್ಗೆ ೭:೩೦ ಗಂಟೆಗೆ ಯಜುರ್ ಉಪಕರ್ಮ ನಡೆಯಲಿದೆ. ತಾ. ೩೦ ರಂದು ಸಂಜೆ ೫:೩೦ ಗಂಟೆಗೆ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಾಘವೇಂದ್ರ ಆರಾಧನೆ ಕಾರ್ಯಕ್ರಮ ನಡೆಯಲಿದ್ದು, ವಿಪ್ರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ನಿಧಿಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.