ಗೋಣಿಕೊಪ್ಪಲು. ಆ. ೧೮: ಗೋಣಿಕೊಪ್ಪಲಿನ ಕರ್ನಾಟಕ ಪಬ್ಲಿಕ್ ಶಾಲೆಗೆ ಗೋಣಿಕೊಪ್ಪ ರೋಟರಿ ಸಂಸ್ಥೆಯ ವತಿಯಿಂದ ೧೦೦ ಕುರ್ಚಿಗಳನ್ನು ಹಸ್ತಾಂತರಿಸಲಾಯಿತು.
ಸರ್ಕಾರಿ ಶಾಲೆಗೆ ರೋಟರಿ ಸಂಸ್ಥೆ ನಿರಂತರವಾಗಿ ಸಹಾಯ ಮಾಡುತ್ತಾ ಬಂದಿದೆ. ಈ ಹಿಂದೆ ಈ ಶಾಲೆಗೆ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತçಗಳು ಸೇರಿದಂತೆ ಪ್ರತಿ ವರ್ಷವೂ ಒಂದಲ್ಲ ಒಂದು ರೀತಿಯ ಸಾರ್ಥಕ ಸಹಾಯವನ್ನು ನೀಡುತ್ತಿದೆ. ಪ್ರಸ್ತುತ ವರ್ಷವೂ ಕೂಡ ಶಾಲೆಯ ಮಕ್ಕಳ ಅನುಕೂಲಕ್ಕಾಗಿ ೧೦೦ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಪ್ರಮೋದ್ ಕಾಮತ್ ಹೇಳಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಗದೀಶ್ ಜೋಡುಬೀಟಿ, ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಮಾಜಿ ಸದಸ್ಯರಾದ ಬಿ.ಎನ್. ಪ್ರಕಾಶ್, ಲಯನ್ಸ್ ಸಮಸ್ಥೆಯ ಮನೆಯಪಂಡ ಮಾಚಯ್ಯ, ಎಂ.ಜಿ. ಮೋಹನ್, ಎಂ.ಜಿ. ನಾರಾಯಣ್, ಕೆ.ಬಿ. ನವೀನ್, ಸುಭಾಷಿಣಿ ಸುಮಿ ಸುಬ್ಬಯ್ಯ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಕುಮಾರ್ ಸ್ವಾಗತಿಸಿ, ವಂದಿಸಿದರು.