ಮಡಿಕೇರಿ, ಆ. ೧೮: ಕುಶಾಲನಗರ ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮAಡಲದ ರಚನೆ ಹಾಗೂ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಭಾಗಮಂಡಲ ವಲಯ ಅರಣ್ಯಾಧಿಕಾರಿ ತ್ಯಾಗರಾಜು ಟಿ.ಎಸ್. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಪದಕಗಳನ್ನು ಧರಿಸುವ ಮೂಲಕ ಅವರ ಜವಾಬ್ದಾರಿಗಳಿಗೆ ಅಧಿಕೃತ ಚಾಲನೆ ನೀಡಿದರು. ಅಲ್ಲದೆ ಶಿಸ್ತು ಜವಾಬ್ದಾರಿ ಹಾಗೂ ಉತ್ತಮ ನಾಯಕತ್ವದ ಗುಣಗಳ ಕುರಿತು ಮಾರ್ಗದರ್ಶನ ನೀಡಿದರು.

ನಂತರ ಶಾಲೆಯ ಅಧ್ಯಕ್ಷ ಟಿ.ಕೆ. ಸುಧೀರ್ ಅವರು ನಾಯಕತ್ವವೆಂದರೆ ಕೇವಲ ಅಧಿಕಾರವಲ್ಲ, ಬದಲಾಗಿ ಶಿಸ್ತು, ಪ್ರಾಮಾಣಿಕತೆ, ಜವಾಬ್ದಾರಿ, ಸೇವಾ ಮನೋಭಾವ ಹಾಗೂ ಇತರರನ್ನು ಗೌರವಿಸುವ ಗುಣಗಳ ಸಮನ್ವಯ ಎಂದು ತಿಳಿಸಿದರು. ವಿದ್ಯಾರ್ಥಿ ನಾಯಕರು ತಮ್ಮ ನಡೆ-ನುಡಿಗಳ ಮೂಲಕ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಮಾರ್ಗದರ್ಶನ ನೀಡಿದರು.

ಶಾಲೆಯ ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ, ಪ್ರಾಂಶುಪಾಲರಾದ ಸತ್ಯ ಸುಲೋಚನ ಎಸ್.ಎಂ., ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನೂತನ ವಿದ್ಯಾರ್ಥಿ ನಾಯಕರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಸಂಕಲ್ಪದೊAದಿಗೆ ಪದಗ್ರಹಣ ಸ್ವೀಕರಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಮತ್ತು ಜವಾಬ್ದಾರಿಯ ಮನೋಭಾವವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು.