ಕುಶಾಲನಗರ, ಆ. ೧೮: ಕುಶಾಲನಗರ ಪುರಸಭೆ ಆವರಣದಲ್ಲಿ ತಾ. ೨೨ ರಂದು ಮಾಜಿ ಮುಖ್ಯಮಂತ್ರಿ ಗುಂಡೂರಾಯರ ಪ್ರತಿಮೆ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ನಿಗದಿಯಾದ ದಿನಾಂಕವನ್ನು ತಾ. ೩೦ ಕ್ಕೆ ಮುಂದೂಡಲಾಗಿದೆ ಎಂದು ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ತಾ. ೨೭ರ ತನಕ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿದೆ.