ಸಿದ್ದಾಪುರ, ಆ. ೧೮: ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಸಿದ್ದಾಪುರ ಪೊಲೀಸ್ ಠಾಣಾ ವತಿಯಿಂದ ವಾಹನ ಚಾಲಕರಿಗೆ ಸಂಚಾರಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್, ಪ್ರತಿಯೊಬ್ಬ ವಾಹನ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು ಹಾಗೂ ವಾಹನದ ದಾಖಲಾತಿಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಬೇಕು ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು. ವಾಹನ ಚಾಲನೆ ಮಾಡುವ ಸಂದರ್ಭ ಮದ್ಯಪಾನ ಸೇವಿಸಿದ್ದಲ್ಲಿ ಅವರಿಗೆ ನ್ಯಾಯಾಲಯದ ಮುಖಾಂತರ ದಂಡ ವಿಧಿಸಲಾಗುವುದು. ಅಪ್ರಾಪ್ತ ವಯಸ್ಸಿನ ಮಕ್ಕಳು ಕೂಡ ವಾಹನ ಚಲಾಯಿಸಿದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಿರುವುದು ಕಂಡುಬAದಿದ್ದು ಈಗಾಗಲೇ ದಾಖಲಾತಿಗಳನ್ನು ಸಮರ್ಪಕವಾಗಿ ಹೊಂದಿಕೊಳ್ಳದ ಹಾಗೂ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದರು. ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡದೇ ಸಂಚಾರ ನಿಯಮವನ್ನು ಪಾಲಿಸುವಂತೆ ಸೂಚನೆಯನ್ನು ನೀಡಿದರು.