ಕೂಡಿಗೆ, ಆ. ೧೮: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದಲ್ಲಿ ರುವ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎ.ಎನ್. ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನೆರವೇರಿತು.

ಹಾಲು ಉತ್ಪಾದಕರ ಸಂಘದ ಸದಸ್ಯರು ಉತ್ತಮ ಗುಣಮಟ್ಟದ ಹಾಲನ್ನು ಸಂಘಕ್ಕೆ ಹಾಕುವ ಮೂಲಕ ಸಂಘದ ಪ್ರಗತಿಗೆ ಸಹಕಾರಿಗಳಾಗಬೇಕು ಎಂದ ಮಂಜುನಾಥ ಅವರು, ಈ ಸಾಲಿನಲ್ಲಿ ಸಂಘವು ರೂ. ೫ ಲಕ್ಷ ದಷ್ಟು ಲಾಭಾಂಶವನ್ನು ಗಳಿಸಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಹಾಸನ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ಬಿ.ವಿ. ವೀಣಾ ಭಾಗವಹಿಸಿ ಒಕ್ಕೂಟದ ಯೋಜನೆಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಎ.ಆರ್. ಮಂಜುನಾಥ, ನಿರ್ದೇಶಕರು ಸೇರಿದಂತೆ ಸಂಘದ ಮುಖ್ಯ ಕಾರ್ಯದರ್ಶಿ ಜಿ.ಕೆ. ಅಕ್ಷಯ್ ಕುಮಾರ್ ಮತ್ತು ಸದಸ್ಯರು ಇದ್ದರು. ಈ ಸಂದರ್ಭದಲ್ಲಿ ಸಂಘಕ್ಕೆ ಹೆಚ್ಚು ಹಾಲು ಹಾಕಿದ ರೈತರಿಗೆ ಬಹುಮಾನವನ್ನು ನೀಡಲಾಯಿತು.