ಮಡಿಕೇರಿ, ಆ. ೧೯; ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾ.೨೦ರಂದು (ಇಂದು) ಮಡಿಕೇರಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿಚಾರ ಸಂಕಿರಣ ಹಾಗೂ ೨೦೨೫-೨೬ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಲು ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕರಿಗೆ ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ.
ಮಧ್ಯಾಹ್ನ ೨ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಉದ್ಘಾಟಿಸಲಿದ್ದಾರೆ. ದಸಂಸ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಕ್ತಿ ಪತ್ರಿಕೆ ಉಪಸಂಪಾದಕ ಕುಡೆಕಲ್ ಸಂತೋಷ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ನಿವೃತ್ತ ಸಹಾಯಕ ಉಪ ವೈದ್ಯಾಧಿಕಾರಿ ಹೆಚ್.ವಿ.ದೇವರಾಜ್, ಸಮಾಜಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಕಡಗದಾಳುವಿನ ಬೆಳೆಗಾರ ಎಂ.ಎಸ್.ಯೂಸಫ್, ಉದ್ಯಮಿ ಕೆ.ಕೆ.ದಾಮೋದರ್, ಕೊಡಗು ಚಾನಲ್ ಸಂಪಾದಕ ಜಿ.ವಿ.ರವಿಕುಮಾರ್, ಕುಶಾಲನಗರದ ಸಮಾಜಸೇವಕ ಟಿ.ಆರ್. ವಾಸುದೇವ. ನಗರಸಭಾ ಆರೊಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ, ದಸಂಸ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ ಸೇರಿದಂತೆ ಇತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.