ಮಡಿಕೇರಿ, ಆ. ೧೯: ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ನ ನಾಲ್ವರು ವಿದ್ಯಾರ್ಥಿಗಳು ದಕ್ಷಿಣ ವಲಯ ಫುಟ್ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಂಡರ್-೧೭ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಜೀವಿತ್ ಚಂಗಪ್ಪ ಹಾಗೂ ಶೋಬಿತ್ ಕೆ.ಎಲ್. ಅವರು ಕರ್ನಾಟಕ ತಂಡಕ್ಕೆ ಆಯ್ಕೆಗೊಂಡಿದ್ದಾರೆ.
ತAಡದಲ್ಲಿ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ ಹಾಗೂ ಜೀವಿತ್ ಚಂಗಪ್ಪ ಅವರು ಫಾರ್ವರ್ಡ್ ಆಟಗಾರರಾಗಿ, ಶೋಬಿತ್ ಕೆ.ಎಲ್. ಅವರು ಗೋಲ್ಕೀಪರ್ ಆಗಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಶಾಲೆಯ ಕ್ರೀಡಾ ತರಬೇತುದಾರ ಹಂಚೆಟ್ಟಿರ ಈರಪ್ಪ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ. ತಾ. ೨೧ರಂದು ಬೆಂಗಳೂರಿನ ಬಿಷಪ್ ಕಾಟನ್ ಪಬ್ಲಿಕ್ ಸ್ಕೂಲ್ನಲ್ಲಿ ಗೋವಾ ರಾಜ್ಯದ ವಿರುದ್ಧ ಮೊದಲ ಪಂದ್ಯವನ್ನು ತಂಡ ಆಡಲಿದೆ.