ವೀರಾಜಪೇಟೆ, ಆ. ೧೯: ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಿ ಕೇರಳದ ಕಸಾಯಿಖಾನೆಗೆ ಸಾಗಿಸಲು ಯತ್ನಿಸಿದ ಆರೋಪದಡಿ ಮೂವರನ್ನು ಬಂಧಿಸಿ, ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬAಧಿಸಿದAತೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಕೋಟುಪರಂಬು ವ್ಯಾಪ್ತಿಯ ಚೌಕಿ ಗ್ರಾಮದ ರಮೇಶ್ ಪೂಜಾರಿ (೬೦), ಕಡಂಗ ಗ್ರಾಮದ ಹ್ಯಾರಿಸ್ ಕೆ.ಎ. (೩೨) ಹಾಗೂ ಮೊಹಮ್ಮದ್ ಶಫೀಕ್ (೨೯) ಬಂಧಿತರು.

ತಾ. ೧೭ರಂದು ನಸುಕಿನ ವೇಳೆ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಡಂಗ ಪೊದ್ದುಮಾನಿ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್ ವಾಹನಗಳನ್ನು ತಪಾಸಣೆ ನಡೆಸಿದರು. ಈ ವೇಳೆ ಎರಡು ವಾಹನಗಳಲ್ಲಿ ಒಟ್ಟು ಆರು ಜಾನುವಾರುಗಳು ಪತ್ತೆಯಾಗಿವೆ.

ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದು, ನ್ಯಾಯಾಲಯದ ಅನುಮತಿ ಮೇರೆಗೆ ಮಾದಾಪಟ್ಟಣದ ಪುಣ್ಯಕೋಟಿ ಗೋವು ಸಂರಕ್ಷಣಾ ಕೇಂದ್ರಕ್ಕೆ ರವಾನಿಸಿದ್ದಾರೆ.

ಈ ಸಂಬAಧ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯ ಗೋ ಸಂರಕ್ಷಣಾ ಮತ್ತು ಗೋಹತ್ಯೆ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಕೆಎ-೧೨ ಸಿ-೩೮೯೯ ಹಾಗೂ ಕೆಎ-೧೨ ಸಿ-೭೭೮೧ ನೋಂದಣಿ ಸಂಖ್ಯೆಯ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ವೀರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ನಿರ್ದೇಶನದಂತೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕಿಶೋರ್ ಕುಮಾರ್ ಶೆಟ್ಟಿ