ಮುಳ್ಳೂರು, ಆ. ೧೯: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ತಾಲೂಕು ಯುವ ಮೋರ್ಚಾ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟ ತಾ. ೨೨ ರಂದು ಗುಡುಗಳಲೆಯಲ್ಲಿ ನಡೆಯಲಿದೆ ಎಂದು ಬಿಜೆಪಿ ಸೋಮವಾರಪೇಟೆ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ತಿಳಿಸಿದರು.

ಶನಿವಾರಸಂತೆ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸೋಮವಾರಪೇಟೆ ತಾಲೂಕು ಯುವ ಮೋರ್ಚಾ ವತಿಯಿಂದ ಗುಡುಗಳಲೆಯ ಸಮರ್ಥ್ ಶ್ರೀಧರ್ ಅವರ ಗದ್ದೆಯಲ್ಲಿ ಬೆಳಿಗ್ಗೆ ೯ ಗಂಟೆಯಿAದ ಸಂಜೆಯವರೆಗೆ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಪುರುಷರಿಗೆ ಕೆಸರುಗದ್ದೆ ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆ ನಡೆಯುಲಿದೆ ಮತ್ತು ಮಹಿಳೆಯರಿಗೆ ಕೆಸರುಗದ್ದೆ ಥ್ರೋಬಾಲ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಬಿಜೆಪಿ ಯುವ ಮೋರ್ಚಾದ ರಾಷ್ಟಿçÃಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ, ಯುವ ಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಮತ್ತು ರಾಜ್ಯದ ಬಿಜೆಪಿ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಕ್ರೀಡಾಕೂಟ ಸಮಿತಿ ಅಧ್ಯಕ್ಷ ನಿತಿನ್ ಮಾತನಾಡಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಅನಂತ್ ಕುಮಾರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್, ರೈತ ಯುವ ಮೋರ್ಚಾ ಉಪಾಧ್ಯಕ್ಷ ರಕ್ಷಿತ್, ಯುವ ಮೋರ್ಚಾ ಉಪಾಧ್ಯಕ್ಷ ಅನಿಲ್ ಹಾಜರಿದ್ದರು.