ಮಡಿಕೇರಿ, ಆ. ೧೯: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವೀರಾಜಪೇಟೆ ಗ್ರಾಮಾಂತರ ಮಂಡಲ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರಕಾರ ಹಾಗೂ ನಾಗೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಮಾಜಿ ಎಂಎಲ್ಸಿ ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವೀರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಪ್ರಮುಖರಾದ ಕುಂಞAಗಡ ಅರುಣ್ ಭೀಮಯ್ಯ, ಮನೆಯಪಂಡ ಕಾಂತಿ ಸತೀಶ್, ರಾಜೇಶ್, ಸುರೇಶ್ ರೈ, ಮಲ್ಲಂಡ ಮಧು ದೇವಯ್ಯ, ನೆರವಂಡ ಅನಿತಾ, ಮೂಕಳೇರ ಕಾವ್ಯ, ದಶಮಿ ದೇಚಮ್ಮ, ಪಿ.ಎಂ. ರವಿ, ಕನ್ನಂಡ ಸಂಪತ್ ಸೇರಿದಂತೆ ಇನ್ನಿತರರು ಹಾಜರಿದ್ದರು.