ಶ್ರೀಮಂಗಲ: ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿಯ ಮಾಯಣಮಾಡ ಮಂದಯ್ಯ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲಾ ಹಂತದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಿವ್ಯ, ಸಂಜನಾ ಹೆಚ್ ಟಿ, ಹಾಗೂ ಸಿಂಚನ ಅವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಟಿ.ಶೆಟ್ಟಿಗೇರಿಯ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಕಟ್ಟೆರ ಗಣೇಶ್ ವಿಶ್ವನಾಥ್, ನಿವೃತ್ತ ಉಪನ್ಯಾಸಕರಾದ ಮೀದೇರಿರ ವಸಂತಕುಮಾರ್, ನಿವೃತ್ತ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮುಕ್ಕಾಟೀರ ವೇಣು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.