ಮಡಿಕೇರಿ, ಆ. ೧೯: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ತಾ. ೨೧ ರಂದು ವಿಶ್ವನಾಗರಿಕರ ದಿನದ ಅಂಗವಾಗಿ ಜಿಲ್ಲೆಯ ೨೫ ಶಾಲೆಗಳಲ್ಲಿ ಏಕಕಾಲದಲ್ಲಿ ಹಿರಿಯ ನಾಗರಿಕರಿಗೆ ಗೌರವ ಸನ್ಮಾನದ ಮೂಲಕ ವಿಭಿನ್ನವಾಗಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಗುತ್ತಿದೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಪಿ.ಆರ್ ಮತ್ತು ಕಾರ್ಯಕ್ರಮ ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.

ಈ ವರ್ಷ ಹಿರಿಯರ ಮಹತ್ವ ತಿಳಿಸುವ ನಿಟ್ಟಿನಲ್ಲಿ ಹಿರಿಯ ನಾಗರಿಕರ ದಿನವನ್ನು ೨೫ ಶಾಲೆಗಳಲ್ಲಿ ವಿವಿಧ ಸಮಯದಲ್ಲಿ ಆಯೋಜಿಸಲಾಗುತ್ತಿದ್ದು, ಮಕ್ಕಳಿಗೆ ಮನೆ ಮತ್ತು ಸಮಾಜದಲ್ಲಿ ಹಿರಿಯರ ಮಹತ್ವ ತಿಳಿಸುವ ಅರ್ಥಪೂರ್ಣ ಕಾರ್ಯಕ್ರಮ ಇದಾಗಲಿದೆ ಎಂದು ತಿಳಿಸಿದ್ದಾರೆ. ವಿವಿದೆಡೆಯ ಕಾರ್ಯಕ್ರಮಗಳಲ್ಲಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಡಾ.ಚೇತನ್ ಜಿ.ಡಿ ಸೇರಿದಂತೆ ಆಯಾ ಶಾಲಾ ವ್ಯಾಪ್ತಿಯ ರೋಟರಿ ಮಿಸ್ಟಿ ಹಿಲ್ಸ್ ನಿರ್ದೇಶಕರು, ಸದಸ್ಯರು ಪಾಲ್ಗೊಳ್ಳಲಿದ್ದಾರೆ.