ವೀರಾಜಪೇಟೆ, ಆ. ೧೯: ವಿಶ್ವ ಸಹೋದರತ್ವ ದಿನ ಹಾಗೂ ರಾಜಯೋಗಿನಿ ದಾದಿ ಪ್ರಕಾಶಮಣಿ ಅವರ ೧೯ನೇ ಪುಣ್ಯಸ್ಮರಣೆಯ ಅಂಗವಾಗಿ ತಾ. ೨೨ ರಂದು ಪಟ್ಟಣದ ಬ್ರಹ್ಮಾಕುಮಾರೀಸ್ ಜ್ಞಾನಗಂಗಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವೀರಾಜಪೇಟೆ, ರೋಟರಿ ವೀರಾಜಪೇಟೆ, ಸಮಾಜ ಸೇವಾ ವಿಭಾಗ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರ ಮಡಿಕೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಬ್ರಹ್ಮಾಕುಮಾರೀಸ್‌ನ ಜ್ಞಾನಗಂಗಾ ಭವನ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೩೦ ರವರೆಗೆ ಶಿಬಿರ ನಡೆಯಲಿದ್ದು, ಕಾರ್ಯಕ್ರಮವನ್ನು ವೀರಾಜಪೇಟೆ ಡಿ.ವೈ.ಎಸ್ಪಿ ಎಸ್. ಮಹೇಶ್ ಕುಮಾರ್ ಉದ್ಘಾಟಿಸಲಿದ್ದು, ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರದ ಡಾ. ಕರುಂಬಯ್ಯ ಕೆ.ಪಿ. ಉಪಸ್ಥಿತರಿರುತ್ತಾರೆ. ಇದೇ ಸಂದರ್ಭ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ನಿವೃತ್ತ ಚೆಸ್ಕಾಂ ಉದ್ಯೋಗಿ ರವಿ ಅವರನ್ನು ಸನ್ಮಾನಿಸಲಾಗುವುದು. ಹೆಚ್ಚಿನ ವಿವರ ಹಾಗೂ ನೋಂದಣಿಗಾಗಿ ದೂರವಾಣಿ ಸಂಖ್ಯೆ ೦೮೨೭೪-೨೫೬೮೩೪ ಅಥವಾ ೯೧೬೪೪೬೪೪೬೪ ಅನ್ನು ಸಂಪರ್ಕಿಸುವAತೆ ಪತ್ರಿಕಾ ಪ್ರಕಟಣೆ ತಿಳಿಸಿದೆ.