ಗೋಣಿಕೊಪ್ಪಲು: ವೀರಾಜಪೇಟೆ ಮಂಡಲ ಬಿಜೆಪಿ ಒಬಿಸಿ ಮೋರ್ಚಾದ ವತಿಯಿಂದ ಗೋಣಿಕೊಪ್ಪಲುವಿನ ಪಂಚಾಯಿತಿಯ ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿ ೮೦ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು.
ಸ್ಥಳೀಯ ವೈದ್ಯರಾದ ಡಾ. ಸೂರಜ್ ಉತ್ತಪ್ಪ ಧ್ವಜರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧ ಮಣಿಕಂಠ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಗುಮ್ಮಟ್ಟಿರ ಕಿಲನ್ ಗಣಪತಿ, ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್ ಭಾಗವಹಿಸಿದ್ದರು.
ಒಬಿಸಿ ಮೋರ್ಚಾದ ಅಧ್ಯಕ್ಷರಾದ ನವೀನ್ ಉತ್ತಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಶಕ್ತಿ ಕೇಂದ್ರದ ಪ್ರಮುಖ್ ಸುರೇಶ್ ರೈ, ಸಹ ಪ್ರಮುಖ್ ಅಬ್ದುಲ್ ಜಲೀಲ್, ಸುಬ್ರಮಣಿ, ಎ.ಕೆ ಸುಬ್ರಮಣಿ, ಗ್ರಾ.ಪಂ. ಮಾಜಿ ಸದಸ್ಯರುಗಳಾದ ಗೀತಾ, ಹಕೀಂ, ಕೆ.ರಾಜೇಶ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂಗವಾಗಿ ನಿವೃತ್ತ ಯೋಧ ಮಣಿಕಂಠ, ವೈದ್ಯರಾದ ಸೂರಜ್ ಉತ್ತಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಕ್ತಿ ಕೇಂದ್ರದ ಸಹ ಪ್ರಮುಖ್ ಕೆ.ಪಿ ಅಬ್ದುಲ್ ಜಲೀಲ್ ಸ್ವಾಗತಿಸಿ, ವಂದಿಸಿದರು. ವರ್ತಕರು ಸೇರಿದಂತೆ ಬಿಜೆಪಿ ಒಬಿಸಿ ಮೋರ್ಚಾದ ಪದಾಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.