ಮಡಿಕೇರಿ, ಆ. ೨೦: ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರಕಾರ ಹಾಗೂ ನಾಗೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್, ಪ್ರಮುಖರಾದ ಅಭಿಮನ್ಯು ಕುಮಾರ್, ಹುಲ್ಲೂರುಕೊಪ್ಪ ಮಾದಪ್ಪ, ಯುವಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಮಂಡಲ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ಸಜನ್ ಮಾದಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.