ಮಡಿಕೇರಿ, ಆ. ೨೦: ಕೆನರಾ ಬ್ಯಾಂಕ್ ವತಿಯಿಂದ ಮಡಿಕೇರಿಯ ಪ್ರಾದೇಶಿಕ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಹೆಣ್ಣುಮಕ್ಕಳಿಗಾಗಿ ‘ಕೆನರಾ ವಿದ್ಯಾಜ್ಯೋತಿ’ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸುಮಾರು ೫೦ ವಿದ್ಯಾರ್ಥಿನಿಯರು, ಪೋಷಕರು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು ೧೮೬ ಹೆಣ್ಣುಮಕ್ಕಳಿಗೆ ರೂ. ೭,೪೪,೦೦೦ ಮೊತ್ತದ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಮಡಿಕೇರಿಯ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ (IಖಿಆP) ಯೋಜನಾ ಸಮನ್ವಯಾಧಿಕಾರಿಯಾದ ಭಾಗೀರಥಿ ಹೆಚ್.ಸಿ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕೆನರಾ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ (ಂಉಒ) ಅಜಿತನ್ ಕೆ. ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.