ಮಡಿಕೇರಿ, ಆ. ೨೦: ಫೀಲ್ಡ್ ಮಾರ್ಷಲ್ ಕೆ. ಎಂ . ಕಾರ್ಯಪ್ಪ ಕಾಲೇಜಿನ ಗ್ರಂಥಾಲಯದಲ್ಲಿ ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದು, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಮೂಡಿಸುವುದು ಹಾಗೂ ಗ್ರಂಥಾಲಯದ ಸದುಪಯೋಗವನ್ನು ಉತ್ತೇಜಿಸುವ ಉದ್ದೇಶದಿಂದ ಸ್ಪರ್ಧಾತ್ಮಕ ಪುಸ್ತಕಗಳ ಪ್ರದರ್ಶನವನ್ನು ಆಯೋಜಿಸಲಾಯಿತು.

ಪ್ರದರ್ಶನದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ UPSಅ, ಏPSಅ, SSಅ, ಬ್ಯಾಂಕಿAಗ್, ರೈಲ್ವೆ, ಓಇಖಿ/Sಐಇಖಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಸಂಬAಧಿಸಿದ ಪುಸ್ತಕಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು.

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರದರ್ಶನಕ್ಕೆ ಭೇಟಿ ನೀಡಿ ಪುಸ್ತಕಗಳನ್ನು ವೀಕ್ಷಿಸಿದರು. ಪ್ರಾಂಶುಪಾಲರಾದ ಪ್ರೊ.ಮೇ. ರಾಘವ ಬಿ., ಭಾರತದ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥನ್ ಅವರ ೧೩೪ ನೇ ಜನ್ಮದಿನಾಚರಣೆಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿದ್ಯಾರ್ಥಿಗಳು ಓದುವ ಅಭಿರುಚಿಯನ್ನು ಹೆಚ್ಚಿಸುವುದರ ಜೊತೆಗೆ ಗ್ರಂಥಾಲಯದಲ್ಲಿರುವ ವಿವಿಧ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಲಹೆ ನೀಡಿದರು. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹರಾದ ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್ ಅವರ ೧೩೪ನೇ ಜನ್ಮದಿನದ ಅಂಗವಾಗಿ ಆಚರಿಸುವ ಗ್ರಂಥಪಾಲಕರ ದಿನಾಚರಣೆ ಬಗ್ಗೆ, ಪುಸ್ತಕಗಳ ಓದಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಗ್ರಂಥಪಾಲಕರಾದ ಡಾ. ವಿಜಯಲತ ಸಿ, ವಿದ್ಯಾರ್ಥಿ ಜೀವನದಲ್ಲಿ ಗ್ರಂಥಾಲಯದ ಮಹತ್ವ, ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳ ಪ್ರದರ್ಶನ ಮತ್ತು ಅದರಿಂದಾಗುವ ಪ್ರಯೋಜನಗಳ ಕುರಿತು ಪ್ರಾಸ್ತಾವಿಕವಾಗಿ ನುಡಿದರು. ಅರ್ಥಶಾಸ್ತç ವಿಭಾಗ ಮುಖ್ಯಸ್ಥ ಪ್ರೋ. ತಿಪ್ಪೇಸ್ವಾಮಿ, ಹಿಂದಿ ವಿಭಾಗದ ಮುಖ್ಯಸ್ಥ ಶ್ರೀಧರ್ ಹೆಗ್ಗಡೆ, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಹಾಜರಿದ್ದರು.