ಮಡಿಕೇರಿ, ಆ. ೨೦: ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವೀರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜ್ಯದ ಪ್ರಸ್ತುತ ವಿಚಾರಗಳು ಹಾಗೂ ಕೆಪಿಎಸ್‌ಸಿ ಎದುರಿಸುತ್ತಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದರು.