ಮಡಿಕೇರಿ: ಮುಳಿಯ ಗೋಲ್ಡ್ & ಡೈಮಂಡ್ಸ್ನ ಮಡಿಕೇರಿ ಶಾಖೆಯಲ್ಲಿ ೮೦ನೇ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಳಿಯ ಗೋಲ್ಡ್ & ಡೈಮಂಡ್ಸ್ನ ಎಲ್ಲಾ ಸಿಬ್ಬಂದಿ ವರ್ಗದವರು ಒಗ್ಗೂಡಿ ರಾಷ್ಟç ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಸಂಸ್ಥೆಯ ಶಾಖಾ ಪ್ರಬಂಧಕರಾದ ಸಂತೋಷ್ ಅವರು ಸ್ವಾತಂತ್ರ‍್ಯೋತ್ಸವದ ಶುಭಾಶಯಗಳನ್ನು ತಿಳಿಸಿ ಶುಭನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಉಪ ಶಾಖಾ ಪ್ರಬಂಧಕರಾದ ಚಂದ್ರಶೇಖರ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಸಿಬ್ಬಂದಿಗೆ ಸಿಹಿ ಹಂಚುವ ಮೂಲಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು.